ಅಮಾನುಷವಾಗಿ ಕೊಲೆಯಾದ ವ್ಯಕ್ತಿಯ ಮೃತ ದೇಹ ಪತ್ತೆ
ಬೆಂಗಳೂರು ನ.2 : ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ರಾಜ ಕಾಲುವೆಯಲ್ಲಿ ತುಂಡರಿಸಿದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಸದ್ಯ ಸ್ಥಳಕ್ಕೆ ರಾಜ ರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಕಿಡಿಗೇಡಿಗಳು ವ್ಯಕ್ತಿಯೊಬ್ಬರನ್ನು ಕೊಂದು ಹಗ್ಗದಲ್ಲಿ ಕಟ್ಟಿ ದೇಹವನ್ನು ರೋಲ್ ಮಾಡಿ ಬಳಿಕ ದೇಹವನ್ನು ತುಂಡರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಮೂಟೆ ಕಟ್ಟಿ ರಾಜ ಕಾಲುವೆಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.