ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಒಂದಕ್ಕಿಯಲ್ಲಿ ಸ್ಥಿರ

ಉಡುಪಿ ನ.2 (ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಸಕ್ರಿಯ ಪ್ರಕರಣಗಳು ಸ್ಥಿರವಾಗಿದೆ.

ಜಿಲ್ಲೆಯಲ್ಲಿ ಇಂದು 4 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಈ ಪೈಕಿ ಕುಂದಾಪುರ ಹಾಗೂ ಕಾರ್ಕಳದಲ್ಲಿ ತಲಾ 2 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 39 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಯಾರೂ ಕೂಡ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 286 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ನ.1 ರಂದು ಜಿಲ್ಲೆಯಲ್ಲಿ 4 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಈ ವರೆಗೆ ಪತ್ತೆಯಾದ 76,714 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 76,199 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2 ನೇ ಅಲೆಯಲ್ಲಿ ನ.1 ರ ವೇಳೆಗೆ ಜಿಲ್ಲೆಯಲ್ಲಿ 8,53,751 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 53,103 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.

Leave a Reply

Your email address will not be published. Required fields are marked *

error: Content is protected !!