ಬೆಂಗಳೂರು ವಿಮಾನ ನಿಲ್ದಾಣದಲ್ಲಿ 87.56 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 87 .56 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಏರ್ ಇಂಟಲಿಜೆನ್ಸ್ ಅಧಿಕಾರಿಗಳು ನೀಡಿದ್ದ ಸುಳಿವಿನ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಬ್ಯಾಗ್‌ವೊಂದರಲ್ಲಿ ಇತರ ವಸ್ತುಗಳ ಜೊತೆಯಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿನ್ನ ಸಾಗಣೆ ಮಾಡುತ್ತಿದ್ದ ಎನ್ನಲಾದ ವ್ಯಕ್ತಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!