ಉಡುಪಿ: ನ.15 ರಂದು ರಾಜ್ಯ ಮಟ್ಟದ 68ನೇ ಅಖಿಲ ಭಾರತ ಸಹಕಾರಿ ಸಪ್ತಾಹ: ಡಾ.ಎಂ.ಎನ್ ರಾಜೇಂದ್ರ ಕುಮಾರ್

ಉಡುಪಿ ನ.2 ( ಉಡುಪಿ ಟೈಮ್ಸ್ ವರದಿ):  ಸಹಕಾರಿ ಕ್ಷೇತ್ರದಿಂದ ಜನರಿಗೆ ಸಿಗುವಂತಹ ವಿವಿಧ ಸೇವೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಮಟ್ಟದ 68 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ನಡೆಯಲಿದೆ ಎಂದು ಎಸ್.ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಮೊದಲ ದಿನ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ. ಎರಡನೇ ದಿನದ ಕಾರ್ಯಕ್ರಮವು ಉಡುಪಿಯಲ್ಲಿ ನ.15 ರಂದು ನಡೆಯಲಿದೆ. ಈ ಕಾರ್ಯಕ್ರಮದ ಸಲುವಾಗಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಸಮೀಪದ ಬೋರ್ಡ್ ಹೈಸ್ಕೂಲ್ ನಲ್ಲಿ  ಬೆಳಿಗ್ಗೆ 8.30 ಕ್ಕೆ ಚಾಲನೆ ನೀಡಲಾಗುತ್ತದೆ. ಇಂಧನ ಹಾಗೂ ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಸಪ್ತಾಹದ ಅಂಗವಾಗಿ ಬೋರ್ಡ್ ಹೈಸ್ಕೂಲ್ ನಿಂದ ಅಮ್ಮಾಣ್ಣಿರಾಮಣ್ಣ ಶೆಟ್ಟಿ ಸಭಾಭವನದವರೆಗೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಜಾನಪದ ತಂಡಗಳು, ಟ್ಯಾಬ್ಲೋಗಳು, ಕಳಶ ಹೊತ್ತ ಮಹಿಳೆಯರು ಹಾಗೂ 500 ಜನರ ಬೈಕ್ ರ್ಯಾಲಿ ನಡೆಯಲಿದೆ. ಈ ಮೆರವಣಿಗೆ ಯಲ್ಲಿ 5000 ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿದರು.

ಇನ್ನು ಸಭಾ ಕಾರ್ಯಕ್ರಮವನ್ನು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೃಷಿ ಹಾಗೂ ರೈತರ ಕಲ್ಯಾಣ ಕಥೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಪೆಕ್ಸ್ ಬ್ಯಾಂಕ್‍ನ ಅಧ್ಯಕ್ಷ ಬೆಳ್ಳಿ ಪ್ರಕಾಶ್,  ಸಹಕಾರಿ ಮಹಾಮಂಡಲದ ಅಧ್ಯಕ್ಷ ಜಿಟಿ ದೇವೇಗೌಡ, ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇವರ ಜೊತೆಗೆ ಉಭಯ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!