ಬೆಂಗಳೂರು : ರಾಜ್ಯದಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ನ.9: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದ್ದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನ.11 ರ ವರೆಗೆ ರಾಜ್ಯದಲ್ಲಿ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು,ಆ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

error: Content is protected !!