ಬೆಂಗಳೂರು:ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಹಣ ಮಂಜೂರು : ಮುಖ್ಯಮಂತ್ರಿ

ಬೆಂಗಳೂರು ನ.9 : ಗೋವಾದಲ್ಲಿರುವ ಕನ್ನಡಿಗರಿಗಾಗಿ ಕನ್ನಡ ಭವನ ನಿರ್ಮಾಣಕ್ಕೆ ರಾಜ್ಯ ಸರಕಾರ ಸಿದ್ಧವಿದ್ದು, ಅದಕ್ಕಾಗಿ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿರುವ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.
ಇದೇ ವೇಳೆ ಕನ್ನಡ ಭವನಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆ ಆದೇಶಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಗೋವಾ ಕನ್ನಡ ಮಹಾಸಂಘದ ಪಧಾಧಿಕಾರಿಗಳಿಗೆ ಮುಖ್ಯ ಯವರು ಈ ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!