ಬಿಟ್ ಕಾಯಿನ್ ವಿಚಾರ ಹೊಸದಲ್ಲ : ಬಿ.ವೈ.ರಾಘವೇಂದ್ರ

ದಾವಣಗೆರೆ: ಬಿಟ್ ಕಾಯಿನ್ ಪ್ರಕರಣದ ವಿಚಾರ ಹೊಸದಲ್ಲ, ಮೂರ್ನಾಲ್ಕು ವರ್ಷಗಳ ಹಿಂದಿನ ಘಟನೆಯಾಗಿದ್ದು, ವಿಚಾರಣೆ ನಂತರ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಘಟನೆಯಲ್ಲ. ಮೂರೂ ನಾಲ್ಕು ವರ್ಷಗಳ ಹಿಂದೆಯೇ ನಡೆದಿರುವ ಘಟನೆಯಾಗಿದ್ದು, ಈಗ ಹೆಚ್ಚಾಗಿ ಬೆಳಕಿಗೆ ಬಂದಿದೆ ಎಂದರು.

ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಈ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸುತ್ತಿವೆ. ಚುನಾವಣೆಗೆ ಒಂದು ವಿಚಾರ ಬೇಕಾಗಿದೆ. ಆ ಕಾರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸುವ ರೀತಿಯಲ್ಲಿ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.

ವಿಶೇಷವಾಗಿ ಬಿಟ್ ಕಾಯಿನ್ ವಿಚಾರದ ಬಗ್ಗೆ ಮುಖ್ಯಮಂತ್ರಿ ದೆಹಲಿಯಲ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ವಿಚಾರಣೆ ನಡೆದರೆ ಯಾರು ತಪ್ಪು ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಸತ್ಯ ಏನು ಎಂಬುದು ಬಹಿರಂಗವಾಗಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!