ಒನಕೆ ಓಬವ್ವ ಜಯಂತಿ ಹಿನ್ನೆಲೆಯಲ್ಲಿ ಓಬವ್ವರ ಕುರಿತು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್

ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವ ಅವರ ಜಯಂತಿ ಹಿನ್ನೆಲೆಯಲ್ಲಿ ಓಬವ್ವನ ಕುರಿತು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

‘ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ’ ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಈ ಸಂದರ್ಭದಲ್ಲಿ ಟ್ವೀಟ್‌ ಮಾಡಿದ್ದು, ನಾಡಿನ ಜನತೆಗೆ ಒನಕೆ ಓಬವ್ವ ಜಯಂತಿಯ ಶುಭಾಶಯ ಹೇಳಿದ್ದಾರೆ. ‘ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ಒನಕೆ ಓಬವ್ವನ ಜನ್ಮದಿನವಾಗಿರುವ ನವೆಂಬರ್‌ 11 ಅನ್ನು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!