ಮೊಗ್ಗಿನ ಮನಸ್ಸು ಶುಭ ಪೂಂಜಾಗೆ ಒಲಿಯಿತು ಕಂಕಣ ಭಾಗ್ಯ
ಮಂಗಳೂರು(ಉಡುಪಿ ಟೈಮ್ಸ್ ವರದಿ) : ಮೊಗ್ಗಿನ ಮನಸ್ಸು ಚಿತ್ರದ ಮೂಲಕ ಮುದ್ದುಮುದ್ದಾದ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿದ್ದ ನಟಿ ಶುಭ ಪೂಂಜಾ ಸದ್ದಿಲ್ಲದೆ ತಮ್ಮ ದೀರ್ಘಕಾಲದ ಗೆಳೆಯ ಸುಮಂತ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಂಗಳೂರಿನ ಮಜಲ ಬೆಟ್ಟು ಬೀಡುವಿನಲ್ಲಿ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಸುಮಂತ್ ಹಾಗೂ ಶುಭಾ ಪೂಂಜಾ ಅವರ ಮದುವೆ ಕಾರ್ಯಕ್ರಮ ಸರಳವಾಗಿ ನಡೆಯಿತು.
ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಶುಭಾಪೂಂಜಾ ಅವರು, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು. ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’’ ಎಂದು ಬರೆದುಕೊಂಡಿದ್ದಾರೆ.
ಇನ್ನು ಶುಭಾ ಪೂಂಜಾ ಅವರ ವಿವಾಹಕ್ಕೆ ಅನೇಕ ಸಿನಿರಂಗದ ಗಣ್ಯರು ಹಾಗೂ ಅವರ ಅಭಾನಿಗಳು ಶುಭಾಶಯ ತಿಳಿಸಿದ್ದಾರೆ.