ಉಡುಪಿ : ಜಿಲ್ಲೆಯಲ್ಲಿ 88 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ
ಉಡುಪಿ ಜ.5 (ಉಡುಪಿ ಟೈಮ್ಸ್ ವರದಿ) : ಒಂದೆಡೆ ಜಿಲ್ಲೆಯ ಕೋವಿಡ್ ಪಾಸಿಟಿವ್ ಪ್ರಕರಣಗಳು ನಿಧಾನವಾಗಿ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಉಡುಪಿ ನಗರವೊಂದರಲ್ಲೆ ಇಂದು 80 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಇಂದು ಜಿಲ್ಲೆಯಲ್ಲಿ ಒಟ್ಟು 88 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲೇ 80, ಕುಂದಾಪುರದಲ್ಲಿ 1, ಕಾರ್ಕಳದಲ್ಲಿ 7 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 352 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದೆ.
ಜ.4 ರಂದು ಜಿಲ್ಲೆಯಲ್ಲಿ 18 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.
Good news channel
Very helpful information and its very good to know about such happening through this channel