ಅಬುಧಾಬಿ:ವಿಮಾನ ನಿಲ್ದಾಣ ತೈಲ ಸಂಗ್ರಹಾರದ ಮೇಲೆ ಡ್ರೋನ್ ದಾಳಿ ಇಬ್ಬರು ಭಾರತೀಯರು ಸೇರಿ ಮೂವರ ಸಾವು

ದುಬೈ ಜ.17 : ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಅರಾಮ್ಕೋ ತೈಲ ಸಂಗ್ರಹಾರದ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ದಾಳಿಯಲ್ಲಿ ಇಬ್ಬರು ಭಾರತಿಯರು ಹಾಗೂ ಓರ್ವ ಪಾಕಿಸ್ತಾನಿ ಪ್ರಜೆ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.

ಅಬುಧಾಬಿಯ ರಾಷ್ಟ್ರೀಯ ತೈಲ ಸಂಸ್ಥೆಯ ಶೇಖರಣಾ ಸೌಲಭ್ಯಗಳ ಸಮೀಪವಿರುವ ಕೈಗಾರಿಕಾ ಮುಸಾಫಾ ಪ್ರದೇಶದಲ್ಲಿ ಮೂರು ಇಂಧನ ಟ್ಯಾಂಕರ್ ಟ್ರಕ್‍ಗಳು ಸ್ಫೋಟಗೊಂಡಿವೆ ಹಾಗೂ ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಫೋಟ ಹಾಗೂ ಬೆಂಕಿ ಕಾಣಿಸಿಕೊಂಡ ಎರಡೂ ಸ್ಥಳಗಳಲ್ಲಿ ಡ್ರೋನ್‍ನ ಭಾಗಗಳು ಕಂಡುಬಂದಿವೆ. ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!