ಹಿಜಾಬ್ ತೆಗೆದು ತರಗತಿಗೆ ಪ್ರವೇಶಿಸಲು ಪ್ರತ್ಯೇಕ ಸ್ಥಳದ ವ್ಯವಸ್ಥೆ ಕಲ್ಪಿಸಿ : ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು, ಫೆ 23 : ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು, ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ, ಪ್ರತ್ಯೇಕ ಸ್ಥಳದಲ್ಲಿ ಹಿಜಾಬ್ ಇರಿಸಲು ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಸುತ್ತೋಲೆಯಲ್ಲಿ ಆದೇಶ ನೀಡಲಾಗಿದೆ. ಹೈಕೋರ್ಟ್ ಮಧ್ಯಂತರ ತೀರ್ಪಿನನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನು ಧರಿಸಿ ಪ್ರವೇಶಿಸದಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ

Leave a Reply

Your email address will not be published. Required fields are marked *

error: Content is protected !!