ಕುಂದಾಪುರ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಾಲೇಜು ಪಿಆರ್’ಓ ವಿರುದ್ಧ ಪ್ರತಿಭಟನೆ

ಕುಂದಾಪುರ(ಉಡುಪಿ ಟೈಮ್ಸ್ ವರದಿ): ಕುಂದಾಪುರದ ಖಾಸಗಿ ಕಾಲೇಜು ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರ ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಧರಣಿ ಕೂತಿರುವ ಘಟನೆ ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಕುಂದಾಪುರದ ಸಂಗಮ್ ನಲ್ಲಿರುವ ಬೈಂದೂರು ಶಾಸಕರ ಆಡಳಿತದಲ್ಲಿರುವ ಕಾಲೇಜಿನ ಪಿ.ಆರ್.ಓ ನಿಂದ ವಿದ್ಯಾರ್ಥಿನಿಯರಿಗೆ ರಾತ್ರಿ ಹೊತ್ತು ಅಲ್ಲಿನ ಅಶ್ಲೀಲ ಸಂದೇಶ ಕಳಿಸುತ್ತಿರುವುದಾಗಿ ವಿದ್ಯಾರ್ಥಿಗಳು ದೂರಿದ್ದಾರೆ. ಡಿಸೆಂಬರ್ ನಿಂದ ಸಂದೇಶಗಳನ್ನು ವಿದ್ಯಾರ್ಥಿನಿಗೆ ಸಂದೇಶ ಕಳುಹಿಸುತ್ತಿದ್ದು ಈಗ ಇದರ ವಿರುದ್ದ ವಿದ್ಯಾರ್ಥಿಗಳು ಧರಣಿ ಕುಳಿತ್ತಿದ್ದಾರೆ.

ಬೈಂದೂರು ಶಾಸಕರು ಸ್ಥಳಕ್ಕೆ ಬರುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದು ಬಿಸಿಲಲ್ಲೇ ಧರಣಿ ನಡೆಸುತ್ತಿದ್ದಾರೆ. ಇದೆ ಸಮಯದಲ್ಲಿ ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಕಾಲೇಜು ಪ್ರಾಂಶುಪಾಲ ಉಮೇಶ್ ರವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಪ್ರಾಂಶುಪಾಲರು ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!