ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಸಿಲುಕಿ ಕೊಂಡಿರುವವರ ಮಾಹಿತಿ ನೀಡಿ: ದ.ಕ ಜಿಲ್ಲಾಡಳಿತ ಮನವಿ

ಮಂಗಳೂರು(ಉಡುಪಿ ಟೈಮ್ಸ್ ವರದಿ): ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು‌ ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ.

ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ‌ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ​ ಆರಂಭಿಸಿದೆ.ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: [email protected] ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.

Leave a Reply

Your email address will not be published. Required fields are marked *

error: Content is protected !!