ಉಳ್ಳಾಲ ಮೀನುಗಾರಿಕಾ ಬೋಟ್ ದುರಂತ ಪ್ರಕರಣ: ಇಬ್ಬರ ಮೃತದೇಹ ಪತ್ತೆ
ಮಂಗಳೂರು: ಉಳ್ಳಾಲದ ಪಶ್ಚಿಮ ಭಾಗದ ಸಮುದ್ರದಲ್ಲಿ ಸಂಭವಿಸಿದ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ತೀವ್ರ ರಕ್ಷಣಾ ಕಾರ್ಯಾಚರಣೆಯ ಬಳಿಕ ಇಂದು ಮಧ್ಯಾಹ್ನದ ವೇಳೆ ಇಬ್ಬರ ಮೃತದೇಹವನ್ನು ಪತ್ತೆಯಾಗಿದ್ದು, ಮೃತದೇಹವನ್ನು ಮಂಗಳೂರಿನ ದಕ್ಕೆಗೆ ತರಲಾಗಿದೆ ಎಂದು ತಿಳಿದು ಬಂದಿದೆ. ಬೋಳಾರದ ಪ್ರಶಾಂತ ಎಂಬವರ ಮಾಲಕತ್ವದ ಶ್ರೀರಕ್ಷಾ ಹೆಸರಿನ ಪರ್ಸಿನ್ ಬೋಟು ಸೋಮವಾರ ಸಂಜೆ 6:30ರ ಸುಮಾರಿಗೆ ಮುಳುಗಡೆಯಾಗಿತ್ತು. ಈ ವೇಳೆ ಅದರಲ್ಲಿದ್ದ 22 ಮೀನುಗಾರರ ಪೈಕಿ ಆರು ಮಂದಿ ನಾಪತ್ತೆಯಾಗಿದ್ದರು.
ನಾಪತ್ತೆಯಾಗಿರುವ ಉಳಿದ ನಾಲ್ವರು ಮೀನುಗಾರರ ಪತ್ತೆಗೆ ಹಲವು ಬೋಟುಗಳು ಅವಘಡ ಸಂಭವಿಸಿದ ಸ್ಥಳದಲ್ಲಿ ಶೋಧ ಮುಂದುವರಿಸಿವೆ.