ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಚ್ಚಿ ಕೊಲೆ

ಬೆಳಗಾವಿ ಮಾ.15 : ನಗರದ ಗುರುಪ್ರಸಾದ್ ಕಾಲೊನಿಯಲ್ಲಿ ಇಂದು ಬೆಳಂಬೆಳಗ್ಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಲ್ಡರ್‌ವೊಬ್ಬರನ್ನು ಕೊಲೆ ಮಾಡಲಾಗಿದೆ.

ಭವಾನಿ ನಗರ ನಿವಾಸಿ ರಾಜು ದೊಡ್ಡಬಣ್ಣವರ (47) ದುಷ್ಕರ್ಮಿಗಳಿಂದ ಕೊಲೆಯಾದ ಬಿಲ್ಡರ್.

ಬಸ್ತವಾಡ ಗ್ರಾಮದ ರಾಜು ಭವಾನಿ ನಗರದಲ್ಲಿ ವಾಸವಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿಯನ್ನು ನೋಡಲು ಬೆಳಗ್ಗೆ ರಾಜು ತಮ್ಮ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ರಾಜು ಅವರ ಕಾರು ತಡೆದಿರುವ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಜು ದೊಡ್ಡಬಣ್ಣವರನ್ನು ಕಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಹತ್ಯೆಗೆ ಹಳೇ ದ್ವೇಷ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಘಟನೆ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!