ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ಅರುಣ್ ಕುಮಾರ್ ಕಲ್ಲುಗದ್ದೆ ಅಧಿಕಾರ ಸ್ವೀಕಾರ

ಬೆಂಗಳೂರು(ಉಡುಪಿ ಟೈಮ್ಸ್ ವರದಿ) : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ನೇಮಕವಾಗಿರುವ ಕಲ್ಲುಗದ್ದೆ ಅರುಣ್ ಕುಮಾರ್ ಅವರು ಇಂದು (ಡಿ.2 ) ಅಧಿಕಾರ ಸ್ವೀಕರಿಸಿದರು. 
ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. 


ಇದೇ ವೇಳೆ ಅಧಿಕಾರ ಸ್ವೀಕರಿಸಿದ ಕುರಿತು ಮಾಹಿತಿ ನೀಡಿದ ಅವರು,  “ಮಾನವ ಹಕ್ಕುಗಳ ಹೋರಟಗಾರನಾಗಿ   ಹಲವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ಪದವೀಧರರ ಹಕ್ಕುಗಳ ಹೋರಾಟಗಾರನಾಗಿಯೂ ಕಾರ್ಯ ನಿರ್ವಹಿಸಿದ್ದೇನೆ. ಇದೀಗ ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಆಯೋಗದ ಸದಸ್ಯನನ್ನಾಗಿ ನೇಮಕ ಮಾಡಿ, ತನಗೆ ಈ ಉನ್ನತ ಹುದ್ದೆಯನ್ನು ನೀಡಿದ ರಾಜ್ಯದ ಮುಖ್ಯಮಂತ್ರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು”.

ಹಿಂದುಳಿದ ಆಯೋಗದ ಸದಸ್ಯನಾಗಿ ಹಿಂದುಳಿದವರ ಸಮಸ್ಯೆಗಳಿಗೆ ಧ್ವನಿಯಾಗುವುದರ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಹಿಂದುಳಿದವರ ಅಭಿವೃದ್ದಿಗಾಗಿ ಶ್ರಮಿಸುತ್ತೇನೆ ಎಂದಿದ್ದಾರೆ. ಹಿಂದುಳಿದ ವರ್ಗಗಳಿಗಾಗಿ ಇರುವ ಅನೇಕ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಮೇಲ್ವಿಚಾರಣೆ ಮಾಡುವ ಕಾರ್ಯವನ್ನು ಸಮರ್ಥವಾಗಿ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!