ವಾಯುಭಾರ ಕುಸಿತ, ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ,ಎಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು ಮಾ.23 : ಕರಾವಳಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇರುವುದರಿಂದ ಮಾ.24 ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಂಡಮಾನ್ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಗುಡುಗು ಸಹಿತ ಚಂಡಮಾರುತ ಬೀಸುವ ಸಾಧ್ಯತೆ ಇರುವುದರಿಂದ ಮಾರ್ಚ್ 24ರವರೆಗೆ ದಕ್ಷಿಣ ಒಳಭಾಗ ಮತ್ತು ಕರಾವಳಿ ಕರ್ನಾಟಕದಾದ್ಯಂತ ಹಳದಿ ಅಲರ್ಟ್ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 24ರ ತನಕ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ಮಾರ್ಚ್ 24ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.
Yes