ಉಡುಪಿ:ಮಾ.27ರಂದು ರವೀಂದ್ರ ಮಂಟಪದಲ್ಲಿ,ವಿಶ್ವ ರಂಗಭೂಮಿ ದಿನಾಚರಣೆ
ಉಡುಪಿ ಮಾ.25 (ಉಡುಪಿ ಟೈಮ್ಸ್ ವರದಿ) : ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗಭೂಮಿ ಉಡುಪಿ, ಉಡುಪಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ-2022’ ಕಾರ್ಯಕ್ರಮವು ಮಾ.27ರಂದು ಸಂಜೆ 6ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಈ ಬಗ್ಗೆ ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ರಥಬೀದಿ ಗೆಳೆಯರು ಉಡುಪಿ ಅಧ್ಯಕ್ಷ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡಕ ಅವರು ಉದ್ಘಾಟಿಸಲಿದ್ದಾರೆ. ಅಂಬಲಪಾಡಿ ಜರ್ನಾದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉದ್ಯಮಿ ಪೆರ್ಣಂಕಿಲ ಶ್ರೀಶ ನಾಯಕ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಂ.ಕೆ. ಮಠ ಉಪ್ಪಿನಂಗಡಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯ್ಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಾಗೂ ರಂಗಭೂಮಿ ಉಪಾಧ್ಯಕ್ಷ ಎಂ. ನಂದಕುಮಾರ್ ಅವರಿಗೆ ವಿಶ್ವರಂಗಭೂಮಿ ದಿನಾಚರಣೆ ಗೌರವ ನೀಡಿ ಸನ್ಮಾನಿಸಲಾಗುವುದು. ಸಭಾಕಾರ್ಯಕ್ರಮದ ಬಳಿಕ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ‘ಉಡಿಯೊಳಗಣ ಕಿಚ್ಚು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದ ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು, ಜೊತೆ ಕಾರ್ಯದರ್ಶಿ ಶ್ರೀಪಾದರ ಹೆಗಡೆ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಪೂರ್ಣಿಮಾ ಸುರೇಶ್, ಆನಂದ ಮೇಲಂಟಿ ಉಪಸ್ಥಿತರಿದ್ದರು