ಕೃಷಿ ಮಸೂದೆ ವಿರೋಧಿಸಿ ರೈತರ ಪ್ರತಿಭಟನೆ – ಮೊದಲ ಮಾತುಕತೆ ವಿಫಲ
ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ನಡೆಸಿರುವ ಮಾತುಕತೆ ವಿಫಲವಾಗಿದೆ.
ವಿಜ್ಞಾನ ಭವನದಲ್ಲಿ ನಡೆದ ಮಾತುಕತೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್, ವಾಣಿಜ್ಯ ಖಾತೆಯ ರಾಜ್ಯ ಸಚಿವ ಸೋಮ್ ಪ್ರಕಾಶ್ ಭಾಗವಹಿಸಿದ್ದು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದು, ರೈತರು ಈ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂಬ ಆಗ್ರಹವನ್ನು ಸರ್ಕಾರದ ಮುಂದಿಟ್ಟಿದ್ದು ಸರ್ಕಾರ ಒಪ್ಪಿಲ್ಲ ಎಂದು ವರದಿಯಾಗಿದ
ಈ ಬಗ್ಗೆ ಮಾಹಿತಿ ನೀಡಿರುವ ರೈತ ಸಂಘಟನೆಗಳ ಮುಖಂಡರು, ಮೊದಲ ಮಾತುಕತೆ ವಿಫಲವಾದ ಕಾರಣ ಗುರುವಾರ ಮತ್ತೊಂದು ಮಾತುಕತೆಗೆ ಸರ್ಕಾರ ಆಹ್ವಾನ ನೀಡಿದೆ ಎಂದು ತಿಳಿಸಿದ್ದಾರೆ.
ಇನ್ನು ಸರ್ಕಾರವು ರೈತರು ಸೂಚಿಸಿರುವ ಸಮಸ್ಯೆಗಳ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸುವ ಪ್ರಸ್ತಾಪ ಮಾಡಿದ್ದು ಈ ಪ್ರಸ್ತಾಪವನ್ನು ಭಾಗವಹಿಸಿದ್ದ 35 ರೈತ ಸಂಘಟನೆಗಳ ಪ್ರತಿನಿಧಿಗಳು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ