ಹೆಬ್ರಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಹೆಬ್ರಿ:ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯ ನಡ್ಪಾಲು ಗ್ರಾಮದಲ್ಲಿ ನಡೆದಿದೆ. ಸುರೇಶ್ ಗೌಡ ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಇವರು, ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.