ಸಂತೆಕಟ್ಟೆ – ಕಲ್ಯಾಣಪುರ ರಸ್ತೆ ಅಗಲೀಕರಣ – ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ

ಸಂತೆಕಟ್ಟೆ(ಉಡುಪಿ ಟೈಮ್ಸ್ ವರದಿ) – ಕಲ್ಯಾಣಪುರ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ರೂ. 3 ಕೋಟಿ ಮಂಜೂರಾಗಿದ್ದು ಇಂದು (ಅ 8 ಗುರುವಾರ) ರಂದು ಶಾಸಕ ಕೆ. ರಘುಪತಿ ಭಟ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯ ಗಡಿಗಳನ್ನು ಗುರುತಿಸಿದರು. ರಸ್ತೆಯ ಇಕ್ಕೆಲಗಳಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಮತ್ತು ಅಂಗಡಿಗಳನ್ನು ರವಿವಾರ ಒಳಗಾಗಿ ಸ್ಥಳಾಂತರಿಸುವಂತೆ ಸೂಚಿಸಿದ್ದು. ಸುಸಜ್ಜಿತವಾದ ಸರ್ಕಲ್ ನಿರ್ಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಬಾಲಕೃಷ್ಣ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಉಮೇಶ್ ಅಮೀನ್ ಹಾಗೂ ಪಕ್ಷದ ಪ್ರಮುಖರಾದ ಉಮೇಶ್ ಶೆಟ್ಟಿ ಮತ್ತು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಭಟ್, ಸಹಾಯಕ ಅಭಿಯಂತರರಾದ ಗಿರೀಶ್, ವಲಯ ಅರಣ್ಯಾಧಿಕಾರಿ ಕ್ಲಿಪರ್ಟ್ ಲೋಬೋ, ಉಪವಲಯ ಅರಣ್ಯಾಧಿಕಾರಿ ಗುರುರಾಜ್ ಕಾವ್ರಾಡಿ, ಗುತ್ತಿಗೆದಾರರಾದ ಮಹೇಶ್ ಪಿ. ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!