ಕ್ರಿಮಿನಲ್ ಮೊಕದ್ದಮೆ: ಯಶೋದಾ ಆಟೋ ಚಾಲಕ ಮತ್ತು ಮಾಲಕರ ಸಂಘದಿಂದ ಎಸ್ ಪಿ ಗೆ ಮನವಿ
ಉಡುಪಿ(ಉಡುಪಿ ಟೈಮ್ಸ್ ವರದಿ ) ಇಲ್ಲಿನ ಪ್ರತಿಷ್ಠಿತ ಬಟ್ಟೆ ಮಳಿಗೆಯ ಘಟನೆಯೊಂದರಲ್ಲಿ ಆಟೋ ಚಾಲಕರು ಮತ್ತು ಮಾಲಕರ ವಿರುದ್ಧ ಸುಳ್ಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಈ ಬಗ್ಗೆ ಎಲ್ಲಾ ಸಿಸಿ ಕೆಮರಾದ ದೃಶವಾಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ತನಿಖೆ ನಡೆಸಬೇಕು ಎಂದು ಯಶೋದಾ ಆಟೋ ಚಾಲಕ ಮತ್ತು ಮಾಲಕರ ಸಂಘದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಪ್ರಕರಣದಲ್ಲಿ ಆಟೋ ಚಾಲಕರಿಂದ ಕೀ ಅನ್ನು ಬಲವಂತವಾಗಿ ಎಳೆದು ರಿಕ್ಷಾ ದಿಗ್ಧಂಧನ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ರಿಕ್ಷಾ ತೆಗೆಯದ ಹಾಗೆ ದಬ್ಬಾಳಿಕೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಮಳಿಗೆ ಮಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ನಗರದಲ್ಲಿ ಸಂಘದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಂತರ ಸಂಘದ ಜಿಲ್ಲಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹಾಗೂ ಅಧ್ಯಕ್ಷ ದಿವಾಕರ ಪೂಜಾರಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.