ಮಧ್ಯ ಪ್ರದೇಶ: ಸಾಮೂಹಿಕ ಅತ್ಯಾಚಾರ ಸಂತ್ರಸ್ಥೆ, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಭೋಪಾಲ್ : ಉತ್ತರ ಪ್ರದೇಶದ ಹಾಥರಸ್ ಸಾಮೂಹಿಕ ಅತ್ಯಾಚಾರದ ಪ್ರಕರಣದ ಬೆನ್ನಲೇ ಮದ್ಯ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು ಸಂತ್ರಸ್ಥ ಮಹಿಳೆ (32) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಧ್ಯಪ್ರದೇಶದ ನರಸಿಂಗ ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದ್ದಿದ್ದು ಸಂತ್ರಸ್ತ ದಲಿತ ಮಹಿಳೆ ಮೇಲೆ ಸೆಪ್ಟೆಂಬರ್ 28 ರಂದು ಸ್ಥಳೀಯ ಪೊಲೀಸ್ ಠಾಣೆಗೆ ಆಗಮಿಸಿ ತನ್ನ ಮೇಲೆ ಮೂವರು ಅತ್ಯಾಚಾರ ಎಸಗಿರುವುದಾಗಿ ದೂರು ನೀಡಿದ್ದರು. ಆದರೆ ಸ್ಥಳೀಯ ಠಾಣೆ ಪೊಲೀಸರು ಇದನ್ನು ದಾಖಲಿಸಿ ಕೊಂಡಿರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 2 ರಂದು ನೇಣು ಬಿಗಿದ ಸ್ಟಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತ ಪಡಿಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ. ಹಾಗು ನಿರ್ಲಕ್ಷ ತೋರಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.