ಇಂದಿನಿಂದಲೇ 100 ಯೂನಿಟ್ ಉಚಿತ ವಿದ್ಯುತ್ ಜಾರಿ ಘೋಷಣೆ!

ಜೈಪುರ, ಜೂ. 01 ಇಂದಿನಿಂದಲೇ ಜಾರಿಗೆ ಬರುವಂತೆ ರಾಜಸ್ಥಾನದ ಪ್ರತಿ ಮನೆಗೆ 100 ಯೂನಿಟ್ ವರೆಗೆ ವಿದ್ಯುತ್ ನೀಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ. 

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ರಾಜಸ್ಥಾನದ ಸಿಎಂ ಈ ಹೊಸ ಘೋಷಣೆ ಹೊರಡಿಸಿದ್ದಾರೆ. ತಿಂಗಳಿಗೆ 100 ಯೂನಿಟ್‌ಗಳವರೆಗೆ ವಿದ್ಯುತ್ ಬಳಕೆಗೆ ನೀಡಲಾಗುವುದು ಮತ್ತು ವಿದ್ಯುತ್ ಬಳಕೆ ಮಾಡುವವರಿಗೆ ಬಿಲ್ ಶೂನ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಅವರು ಯಾವುದೇ ಬಿಲ್ ಕಟ್ಟುವಂತೆ ಇಲ್ಲ. ಬಿಲ್ ಎಷ್ಟು ಬಂದರೂ ಮೊದಲ 100 ಯೂನಿಟ್‌ಗೆ ಯಾವುದೇ ವಿದ್ಯುತ್ ಶುಲ್ಕವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ತಿಂಗಳಿಗೆ 200 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಮಧ್ಯಮ ವರ್ಗದ ಗ್ರಾಹಕರು, ಮೊದಲು 100 ಯೂನಿಟ್ ವಿದ್ಯುತ್ ಉಚಿತವಾಗಿದೆ ಮತ್ತು 200 ಯೂನಿಟ್‌ಗಳವರೆಗೆ ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕ ಮತ್ತು ಈ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ. 

ರಾಜಸ್ಥಾನದಾದ್ಯಂತ ಹಣದುಬ್ಬರ ಪರಿಹಾರ ಶಿಬಿರಗಳಲ್ಲಿ ವ್ಯಕ್ತವಾದ ಅಭಿಪ್ರಾಯದ ಆಧಾರದ ಮೇಲೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ಇನ್ನೂ ಈ ಪರಿಹಾರ ಶಿಬಿರಗಳಲ್ಲಿ 10 ಪ್ರಮುಖ ಯೋಜನೆಗಳಿಗೆ ಜನರಿಂದ ನೋಂದಣಿ ಮಾಡಲಾಗುತ್ತಿದೆ. ಅದರಲ್ಲಿ ಉಚಿತ ವಿದ್ಯುತ್ ಯೋಜನೆ ಕೂಡ ಒಂದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!