ಬೆಳಪು: ಅತ್ಯಾಧುನಿಕ ತ್ಯಾಜ್ಯ ಘಟಕಕ್ಕೆ ಸಿದ್ಧತೆ, ಪ್ರೀತಿ ಗೆಹ್ಲೋಟ್ ಭೇಟಿ
ಪಡುಬಿದ್ರಿ: ‘ಬೆಳಪುವಿನಲ್ಲಿ ರಾಜ್ಯಕ್ಕೆ ಮಾದರಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದರು.
ಬೆಳಪು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ತ್ಯಾಜ್ಯ ವಿಲೇವಾರಿ ಘಟಕದ ಯೋಜನಾ ಪ್ರದೇಶವನ್ನು ಪರಿಶೀಲಿಸಿದ ಬಳಿಕ ಅವರು ಈ ಮಾಹಿತಿ
ನೀಡಿದರು.ಪ್ಲಾಸ್ಟಿಕ್, ಘನ ಮತ್ತು ದ್ರವ ತ್ಯಾಜ್ಯವನ್ನು ಬೇರ್ಪಡಿಸುವ ವಿಧಾನ, ಕೋಳಿ ತ್ಯಾಜ್ಯಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
‘ಬೆಳಪುವಿನಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಈಗಾಗಲೇ 3 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಕಸದಿಂದ ರಾಸಾಯನಿಕ ಸಾವಯವ ಗೊಬ್ಬರ ತಯಾರಿಸುವ ಘಟಕವನ್ನು ಸ್ಥಾಪಿಸುವ ಉದ್ದೇಶವಿದ್ದು, ಪರಿಸರ ಸ್ನೇಹಿ ಯೋಜನೆಯನ್ನು ರೂಪಿಸಬೇಕೆಂಬುದು ನಮ್ಮ ಆಶಯ.
ಸಹಕಾರ ನೀಡಿದರೆ ನೆರೆಯ ಗ್ರಾಮಗಳ ತ್ಯಾಜ್ಯ ವಿಲೇವಾರಿಗೂ ಅವಕಾಶ ಕಲ್ಪಿಲಾಗುವುದು’ ಎಂದು ದೇವಿಪ್ರಸಾದ್ ಶೆಟ್ಟಿ
ಬೆಳಪು ಗ್ರಾಮ ಪಂಚಾಯಿತಿ ಕೈಗೊಂಡ ಅಭಿವೃದ್ಧಿ ಯೋಜನೆಗಳು ಆರ್ಥಿಕ ಸಂಪನ್ಮೂಲ ಅಭಿವೃದ್ಧಿಗೆ ರೂಪಿಸಿದ ಯೋಜನೆ, ಸಮಗ್ರವಾದ ಕ್ರೀಡಾಂಗಣ ನಿರ್ಮಾಣ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಬಗ್ಗೆ ಪ್ರೀತಿ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದರು. ತ್ಯಾಜ್ಯ ವಿಲೇವಾರಿಗೆ ವಾಹನ ಖರೀದಿ ಮತ್ತು ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದರು