ಚಿನ್ನದ ಪದಕ ಕನಸು ನುಚ್ಚುನೂರು: ವಿನೇಶ್ ಫೋಗಟ್ ಒಲಿಂಪಿಕ್ಸ್ ಫೈನಲ್’ನಿಂದ ಅನರ್ಹ!

ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗುತ್ತದೆ ಎಂದು ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದಾರೆ.

ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಂಡಿದೆ. ರಾತ್ರಿಯಿಡೀ ತಂಡವು ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ಅಧಿಕ ತೂಕ ಹೊಂದಿದ್ದರು. ಈ ಸಂದರ್ಭದಲ್ಲಿ ಅವರ ಖಾಸಗಿತನವನ್ನು ಗೌರವಿಸಿ ಅವರ ಜೊತೆ ನಿಲ್ಲುತ್ತದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.

ದೂರು ನೀಡಲು ಭಾರತ ನಿರ್ಧಾರ: ಕೇವಲ ಕೂದಲೆಳೆ ಅಂತರದಲ್ಲಿ ಫೈನಲ್ ಪಂದ್ಯ ಆಡುವುದರಿಂದ ವಿನೇಶ್ ಫೋಗಟ್ ಅವಕಾಶ ಕಳೆದುಕೊಂಡಿದ್ದು, ಅವರ ಅನರ್ಹತೆ ಪ್ರಶ್ನಿಸಿ ದೂರು ನೀಡಲು ಭಾರತ ಒಲಿಂಪಿಕ್ಸ್ ಅಸೋಸಿಯೇಷನ್ ನಿರ್ಧರಿಸಿದೆ.

Leave a Reply

Your email address will not be published. Required fields are marked *

error: Content is protected !!