Union Budget-2024: ಮತ್ಸ್ಯ ಸಂಪದ ಯೋಜನೆ ಘೋಷಣೆ, ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ
ನವದೆಹಲಿ: ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯನ್ನು ಆರಂಭಿಸಿದ್ದು, ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ಸತತ ಐದು ಬಜೆಟ್ಗಳನ್ನು ಮಂಡಿಸಿರುವ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ.ಚಿದಂಬರಂ ಹಾಗೂ ಯಶವಂತ್ ಸಿನ್ಹಾ ಅವರ ದಾಖಲೆಗಳನ್ನೂ ನಿರ್ಮಲಾ ಸೀತಾರಾಮನ್ ಅವರು ಮುರಿದಿದ್ದಾರೆ. ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಿದ್ದು, ಚುನಾವಣೆಗೂ ಮುನ್ನ ಮಂಡಿಸಲಿರುವ ಬಜೆಟ್ ಆಗಿರುವುದರಿಂದ ಇದು ಪೂರ್ಣ ಪ್ರಮಾಣದ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಿದೆ.
ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆ ಪ್ರಾರಂಭವಾಯಿತು. ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.
ಈ ಏಪ್ರಿಲ್ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ತಿಳಿಸಿದೆ.
ಭಾರತದ ಆರ್ಥಿಕತೆಯು 2022-23ರಲ್ಲಿ ಶೇ.7.2 ಮತ್ತು 2021-22ರಲ್ಲಿ ಶೇ.8.7ರಷ್ಟು ಬೆಳವಣಿಗೆ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತದ ಆರ್ಥಿಕತೆಯು ಶೇ.7.3 ಬೆಳವಣಿಗೆ ನಿರೀಕ್ಷಿಸಲಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ.
ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆ ಪ್ರಾರಂಭವಾಯಿತು.
ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.
ಈ ಏಪ್ರಿಲ್ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ತಿಳಿಸಿದೆ.
ಭಾರತದ ಆರ್ಥಿಕತೆಯು 2022-23ರಲ್ಲಿ ಶೇ.7.2 ಮತ್ತು 2021-22ರಲ್ಲಿ ಶೇ.8.7ರಷ್ಟು ಬೆಳವಣಿಗೆ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತದ ಆರ್ಥಿಕತೆಯು ಶೇ.7.3 ಬೆಳವಣಿಗೆ ನಿರೀಕ್ಷಿಸಲಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ.
ಮತ್ಸ್ಯ ಸಂಪದ ಯೋಜನೆ ಘೋಷಣೆ
ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೀನುಗಾರರ ಅಭಿವೃದ್ಧಿಗಾಗಿ ರೂಪಿಸಲಾಗಿರುವ ಮತ್ಸ್ಯಯೋಜನೆಯಿಂದ 55 ಲಕ್ಷ ಹೊಸ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದು ವಿತ್ತ ಸಚಿವರು ಸದನಕ್ಕೆ ತಿಳಿಸಿದ್ದಾರೆ.
9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ
ಗರ್ಭಕೋಶ ಕ್ಯಾನ್ಸರ್ ತಡೆಗಾಗಿ ಕೇಂದ್ರ ಸರ್ಕಾರವು ಉಚಿವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ
- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ
- ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು
- ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ
1 ಕೋಟಿ ಮನೆಗಳಿಗೆ ಸೋಲಾರ್ ಪ್ಯಾನೆಲ್ ಅಳವಡಿಕೆ, 300 ಯುನಿಟ್ ವಿದ್ಯುತ್ ಉತ್ಪಾದನೆ
ಗರ್ಭಕೋಶ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ
ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ
ಜಿಡಿಪಿ ಮೇಲೆ ಸರ್ಕಾರದ ಗಮನ
ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ- ನಿರ್ಮಲಾ
ತ್ರಿವಳಿ ತಲಾಖ್
ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ: ವಿತ್ತ ಸಚಿವೆ
ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ ಮಾಡುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸರ್ವೈಕಲ್ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಲಸಿಕೆ ನೀಡುವ ಯೋಜನೆಯನ್ನೂ ಕೇಂದ್ರ ವಿತ್ತಸಚಿವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಅವರ ಭಾಷಣದ ಮುಖ್ಯಾಂಶಗಳು…
- ಸಾಮಾಜಿಕ ನ್ಯಾಯದ ತತ್ವದಲ್ಲಿ ಕೇಂದ್ರ ಸರ್ಕಾರವು ಆಡಳಿತ, ಸೇವೆ, ಅಭಿವೃದ್ಧಿಗೆ ಆದ್ಯತೆ ನೀಡಿದೆ.
- 2047ರ ವೇಳೆಗೆ ಭಾರತ ವಿಕಸಿತವಾಗಲಿದೆ, ಜಗತ್ತಿನಲ್ಲೇ ಬಲಿಷ್ಠವಾಗಿದೆ
- ಕೇಂದ್ರ ಸರ್ಕಾರವು ಸ್ವಜನ ಪಕ್ಷಪಾತ, ವಂಶಾಡಳಿತಕ್ಕೆ ಇತಿಶ್ರೀ ಹಾಡಿದೆ
- ಭ್ರಷ್ಟಾಚಾರ ನಿಗ್ರಹ ಮಾಡಿದ ಪರಿಣಾಮ ದೇಶವು ಸಾಮಾಜಿಕ ಆರ್ಥಿಕ ಏಳಿಗೆ ಸಾಕಾರವಾಗಿದೆ.
- ಕೇಂದ್ರ ಸರ್ಕಾರದ ಸಮರ್ಥ ಆಡಳಿತದಿಂದ 25 ಕೋಟಿ ಜನ ಬಡತನದಿಂದ ಹೊರಗೆ
- ಜನಧನ್ ಯೋಜನೆಯಿಂದ 2.7 ಲಕ್ಷ ಕೋಟಿ ರೂ. ಉಳಿತಾಯ ಖಾತೆಗೆ ಜಮೆ
- ಪಿಎಂ ಸ್ವನಿಧಿ ಯೋಜನೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯಧನ
- ಪಿಎಂ ಜನಮನ ಯೋಜನೆಯಿಂದ ಬುಡಕಟ್ಟು ಸಮುದಾಯಗಳಿಗೆ ನೆರವು
- ಪಿಎಂ ವಿಶ್ವಕರ್ಮ ಯೋಜನೆಯಿಂದ ಸಮುದಾಯಗಳ ಏಳಿಗೆ
- ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಿಂದ 11.8 ಕೋಟಿ ರೈತರಿಗೆ ವಾರ್ಷಿಕ 6 ಸಾವಿರ ರೂ. ಸಹಾಯಧನ
ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ
ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಹೆಚ್ಚು
10 ವರ್ಷಗಳಲ್ಲಿ ಉನ್ನತ ಶಿಕ್ಷಣಕ್ಕೆ ಶೇ.28 ರಷ್ಟು ಮಹಿಳೆಯರು ದಾಖಲಾಗಿದ್ದಾರೆ. ಒನ್ ನೇಷನ್ ಒನ್ ಮಾರ್ಕೆಟ್ ಜಾರಿ ಪಿಎಂ ಆವಾಸ್ ಯೋಜನೆಯಲ್ಲಿ ಶೇ.70 ರಷ್ಟು ಮನೆ ನಿರ್ಮಾಣ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ ಬಡತನ ಅಂಚಿನಲ್ಲಿರುವ ಮತ್ತು ಸಣ್ಣ ರೈತರು ಸೇರಿದಂತೆ 11.8 ಕೋಟಿ ರೈತರಿಗೆ ನೇರ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಸಂಸತ್ತಿನಲ್ಲಿ ಇಂದು ಮಧ್ಯಂತರ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 4 ಕೋಟಿ ರೈತರಿಗೆ ಬೆಳೆ ವಿಮೆ ನೀಡಲಾಗಿದೆ, ಇವು ದೇಶಕ್ಕೆ ಮತ್ತು ಜಗತ್ತಿಗೆ ಆಹಾರವನ್ನು ಉತ್ಪಾದಿಸಲು ರೈತರಿಗೆ ಸಹಾಯ ಮಾಡುತ್ತಿವೆ ಎಂದರು.
2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ
5 ವರ್ಷಗಳಲ್ಲಿ 3 ಕೋಟಿ ಮನೆ ನಿರ್ಮಾಣ ಗುರಿ, ಜನರು ಹೆಚ್ಚಿನ ಆದಾಯ ಗಳಿಸಲು ಹೆಚ್ಚಿನ ಆದ್ಯತೆ, ವಿಶ್ವದ ಸಮಸ್ಯೆಗಳಿಗೆ ಭಾರತ ಪರಿಹಾರ ನೀಡಿದೆ. ಎನ್ಇಪಿ ಮೂಲಕ ಯುವಕರ ಸಬಲೀಕರಣ.
ಪಿಎಂ ಸ್ವಾನಿಧಿ ಯೋಜನೆಯಡಿ 78 ಲಕ್ಷ ಬೀದಿ ವ್ಯಾಪಾರಿಗಳಿಗೆ ಸಾಲದ ನೆರವು ನೀಡಲಾಗಿದೆ. ಒಟ್ಟು 2.3 ಲಕ್ಷ ಮಂದಿ ಮೂರನೇ ಬಾರಿಗೆ ಸಾಲ ಪಡೆದಿದ್ದಾರೆ. ಪ್ರಧಾನಮಂತ್ರಿ ಜನ್ ಮನ್ ಯೋಜನೆಯು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳನ್ನು ತಲುಪುತ್ತದೆ. ಪ್ರಧಾನಮಂತ್ರಿ ವಿಶಕರ್ಮ ಯೋಜನೆಯು ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳಿಗೆ ಅವರ ಜೀವನದ ಕೊನೆಯವರೆಗೂ ಸಹಾಯ ಮಾಡುತ್ತದೆ. ವಿಶೇಷ ಚೇತನರು ಮತ್ತು ತೃತೀಯಲಿಂಗಿಗಳ ಸಬಲೀಕರಣದ ಯೋಜನೆಯು ಯಾರನ್ನೂ ಸರ್ಕಾರವು ಯಾರನ್ನೂ ಹಿಂದೆ ಬಿಡುವುದಿಲ್ಲ ಎಂಬ ನಮ್ಮ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ದೇಶದಲ್ಲಿ ಬಡತನವನ್ನು ನಿಭಾಯಿಸುವ ಹಿಂದಿನ ವಿಧಾನವು ಅತ್ಯಂತ ಸಾಧಾರಣ ಫಲಿತಾಂಶಗಳನ್ನು ನೀಡಿತು. ಬಡವರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಶಕ್ತ ಪಾಲುದಾರರಾದಾಗ, ಅವರಿಗೆ ಸಹಾಯ ಮಾಡುವ ಸರ್ಕಾರದ ಶಕ್ತಿ ಅನೇಕ ಪಟ್ಟು ಹೆಚ್ಚಾಗುತ್ತದೆ. ಕಳೆದ 10 ವರ್ಷಗಳಲ್ಲಿ ಸರ್ಕಾರವು ಬಹು ಆಯಾಮದ ಬಡತನದಿಂದ ನಿರ್ಗತಿಕರನ್ನು ಮುಕ್ತಿಗೊಳಿಸಲು 25 ಕೋಟಿ ಜನರಿಗೆ ನೆರವು ನೀಡಿದೆ- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರದ ಸಾಧನೆಗಳನ್ನು ಮಂಡಿಸುತ್ತಿರುವ ವಿತ್ತ ಸಚಿವರು
ಸ್ಕಿಲ್ ಇಂಡಿಯಾ ಮಿಷನ್ ನಿಂದ 1.4 ಕೋಟಿ ಯುವಕರಿಗೆ ತರಬೇತಿ, 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ, ದೇಶಾದ್ಯಂತ 390 ವಿಶ್ವವಿದ್ಯಾಲಯಗಳನ್ನು ಕೇಂದ್ರ ಸರ್ಕಾರ ಆರಂಭಿಸಿದೆ.