ಉನ್ನಾವೋ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್‌ಗೆ ಜೀವಾವಧಿ ಶಿಕ್ಷೆ
December 20, 2019
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹ 25 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ದಂಡದ ಹಣದಲ್ಲಿ ಅತ್ಯಾಚಾರ ಸಂತ್ರಸ್ತೆಗೆ ₹ 10 ಲಕ್ಷ ನೀಡಬೇಕೆಂದು ಜಿಲ್ಲಾ ನ್ಯಾಯಮೂರ್ತಿ ಧರ್ಮೇಶ್ ಶರ್ಮಾ ಆದೇಶಿಸಿದ್ದಾರೆ.