ಅರಬ್ಬಿ ಸಮುದ್ರ ವಾಯಭಾರ ಕುಸಿತ: ರೆಡ್ ಅಲರ್ಟ್
ಉಡುಪಿ: ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಸೂಕ್ತ ಎಚ್ಚರಿಕೆ ವಹಿಸುವಂತೆ ಪ್ರಕಟನೆ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು,ಸದ್ಯ ಸಾಧಾರಣ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಪ್ರಭಾವದಿಂದ ಕೇರಳ-ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕಿಳಿಯದಂತೆ ಸೂಚಸಿಲಾಗಿದೆ.