ಸೊರಕೆಗೆ ಜೀವ ಬೆದರಿಕೆ: ವಿಶ್ವನಾಥ್ ಪೂಜಾರಿ ವಿರುದ್ದ ದೂರು ದಾಖಲು
ಉಡುಪಿ: ಬಿಲ್ಲವ ಮತ್ತು ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿ, ಜೀವ ಬೆದರಿಕೆ ಒಡ್ಡಿದಾತನ ಮೇಲೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲು.
ಜ.11 ರಂದು ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನವನ್ನು ಅಜ್ಜರಕಾಡು ಪುರಭವನದಲ್ಲಿ ನಡೆಸಲು ವಿವಿಧ ಸಂಘ ಸಂಸ್ಥೆಗಳ, ರಾಜಕೀಯಾ ನಾಯಕರ ಸಭೆ ಕರೆದು ನಡೆಸಲು ತೀರ್ಮಾನಿಸಲಾಗಿತ್ತು.
ಆದರೆ ಇದಕ್ಕೆ ಹಲವಾರು ಬಿಲ್ಲವ ಸಂಘಟನೆಗಳು, ರಾಜಕೀಯಾ ನಾಯಕರು ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲ ತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬರಹಗಳು ಹರಿದಾಡಿತ್ತು. ಅಷ್ಟೇ ಅಲ್ಲದೆ ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕಡ್ತಲ ವಿಶ್ವನಾಥ ಪೂಜಾರಿ ಈ ಕಾರ್ಯಕ್ರಮವನ್ನು ರದ್ದುಗೊಳಿಸಿ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಚಿಂತಕ, ಬರಹಗಾರ ದಿನೇಶ್ ಅಮೀನ್ ಮಟ್ಟು ಅವರಿಗೆ ದೂರವಾಣಿಯಲ್ಲಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಒಡ್ಡಿರುತ್ತಾನೆ.
ಕಾರ್ಯಕ್ರಮ ರದ್ದುಗೊಳಿಸದೆ ಇದ್ದಲ್ಲಿ ಗುಂಡಿಕ್ಕಿ ಕೊಲ್ಲುವ ಬೆದರಿಕೆ ಹಾಕಿದ್ದಾನೆ. ಹಾಗೂ ಈ ಆಡಿಯೋವನ್ನು ವಾಟ್ಸ್‌ಆಪ್ ಮೂಲಕ ವೈರಲ್ ಮಾಡಿ ಅವರ ಘನತೆಗೆ ಕುಂದು ತಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ದಿವಾಕರ್ ಬೊಳ್ಜೆ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಠಾಣೆಯಲ್ಲಿ ದೂರು ದಾಖಸಿದ್ದಾರೆ.