ನೆರೆ ಪರಿಹಾರ ನಿಧಿಗೆ 25 ಕೋಟಿ ನೀಡಲು ಚಿಂತನೆ: ಡಾ. ವೀರೇಂದ್ರ ಹೆಗ್ಗಡೆ

ಮಂಗಳೂರು: ಮಹಾ ಮಳೆ ಹಾಗೂ ಪ್ರವಾಹಕ್ಕೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಪ್ರವಾಹ ಸಂತ್ರಸ್ತರು ಮನೆ, ಜಮೀನು, ಆಸ್ತಿಪಾಸ್ತಿ ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಮಧ್ಯೆ ಪ್ರವಾಹ ಸಂತ್ರಸ್ತರಿಗೆ 25 ಕೋಟಿ ರೂ. ನೆರವು ನೀಡಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂದಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ನೆರೆ ಸಂತ್ರಸ್ತರಿಗೆ 25 ಕೋಟಿ ನೆರವು ನೀಡಲಾಗುವುದು. ಈ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಖಾತೆಗೆ ಹಾಕಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕು ಸಂತ್ರಸ್ತರಿಗೆ 50 ಲಕ್ಷ ರೂ. ಶ್ರಮಿಕ ಕಾಳಜಿ ರಿಲೀಫ್ ಫಂಡ್‍ಗೆ ನೀಡಲಾಗಿದೆ. ಈ ಹಣವನ್ನು ಚೆಕ್ ಮೂಲಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹಸ್ತಾಂತರಿಸಲಾಗಿದೆ. ಅಷ್ಟೇ ಅಲ್ಲದೆ ಪಶ್ಚಿಮಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ 2 ಕೋಟಿ ರೂ. ಮೀಸಲು, ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ ಮಾಡಿ 2 ಲಕ್ಷ ಸದಸ್ಯರಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.

ಈ ವೇಳೆ ಮಾತನಾಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸಂತ್ರಸ್ತರು ಪರಿಹಾರ ಮೊತ್ತ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಮಳೆ ನಿಂತು ರಾಜ್ಯದಲ್ಲಿ ಸಮೃದ್ಧಿ ನೆಲೆಸಲಿ ಎಂದು ಆಶಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!