ಉಗ್ರರ ದಾಳಿ ಎಚ್ಚರಿಕೆ ! ಬೆಂಗಳೂರು ಹಾಗೂ ಮಂಗಳೂರು ನಲ್ಲಿ ಹೈ ಅಲರ್ಟ್
ಬೆಂಗಳೂರು/ ಮಂಗಳೂರು :ಉಗ್ರರ ದಾಳಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಯಾವುದೇ ಕ್ಷಣದಲ್ಲಿ ಉಗ್ರರರು ದಾಳಿ ಮಾಡಬಹುದು ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ಭದ್ರತೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ಎಲ್ಲಾ ಆಯ ಕಟ್ಟಿನ ಸ್ಥಳಗಳಲ್ಲಿ ಭಾರೀ ಭದ್ರತೆ ಒದಗಿಸಬೇಕು. ಪ್ರತಿಯೊಂದು ಜಾಗದಲ್ಲಿಯೂ ಸಿಸಿಟಿವಿ ಕ್ಯಾಮೆರಾ ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಿ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಪ್ರಮುಖ ಸ್ಥಳಗಳಲ್ಲಿ ಖುದ್ದು ಇದ್ದು ಭದ್ರತೆ ನೋಡಿಕೊಳ್ಳಬೇಕು. ನಗರದಲ್ಲಿ ಅನುಮಾನಾಸ್ಪದ ರೀತಿಯ ವ್ಯಕ್ತಿ, ವಾಹನ, ಬ್ಯಾಗ್ಗಳನ್ನು ತಪಾಸಣೆ ಮಾಡಿ ಎಂದು ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಪ್ರೈವೆಟ್ ಸೆಕ್ಯೂರಿಟಿ ಗಾರ್ಡ್ ಗಳನ್ನು ಭದ್ರತೆಗೆ ಬಳಸಿಕೊಳ್ಳಿ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳ ರೌಂಡ್ಸ್ ನಲ್ಲಿ ಇರಬೇಕು. ತಮ್ಮ ವ್ಯಾಪ್ತಿಯ ಆಯಕಟ್ಟಿನ ಪ್ರದೇಶದಲ್ಲಿ ಹಿರಿಯ ಅಧಿಕಾರಿಗಳು ಮೊಕಾಂ ಹುಡಬೇಕು. ನೈಟ್ ರೌಂಡ್ಸ್ ಇರುವ ಅಧಿಕಾರಿಗಳು ಅನುಮಾನಾಸ್ಪದ ವ್ಯಕ್ತಿ ಹಾಗೂ ವಾಹನ ಕಂಡು ಬಂದರೆ ವಶಕ್ಕೆ ಪಡೆಯಬೇಕು. ಪಿಜಿ, ಹಾಸ್ಟೆಲ್,ಅಪಾಟ್ರ್ಮೆಂಟ್, ಮಸೀದಿ, ದೇವಸ್ಥಾನಗಳ ಬಳಿ ಪೊಲೀಸರು ತಪಾಸಣೆ ನಡೆಸಬೇಕು ಎಂದು ಆದೇಶ ನೀಡಿದ್ದಾರೆ.
ತಮ್ಮ ತಮ್ಮ ಪ್ರದೇಶದ ಬಿಟ್ ಪೊಲೀಸರು ಅಲರ್ಟ್ ಆಗಿರಬೇಕು. ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಸಂಪೂರ್ಣ ತಪಾಸಣೆ ಮಾಡಬೇಕು. ಚೆಕ್ ಪೋಸ್ಟ್ ಗಳು, ನಗರದ ಒಳಗೆ ಹೊರಗೆ ಹೋಗುವ ವಾಹನಗಳ ತಪಾಸಣೆಯಾಗಬೇಕು. ವಿಧಾನಸೌಧ, ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್, ಮಾಲ್, ಮಾರ್ಕೆಟ್ ಸುತ್ತಮುತ್ತ ಹೈ ಅಲರ್ಟ್ ಆಗಿರಿ. ಎಲ್ಲಾ ಕಡೆ ಕೆಎಸ್ಆರ್ ಪಿ ನಿಯೋಜನೆ ಮಾಡಬೇಕು ಎಂದು ಸೂಚಿಸಿದ್ದಾರೆ.ಕೆ ಎಸ್ ಹೆಗ್ಡೆ ಆಸ್ಪತ್ರೆಯ ಒಳಗೆ ಪೊಲೀಸ್ ಶ್ವಾನ ಹಾಗೂ ಬಾಂಬ್ ಪತ್ತೆ ದಳ ಹಾಗು ಆಸ್ಪತ್ರೆ ಹೊರ ಭಾಗದಲ್ಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ
ಮಂಗಳೂರಿನಲ್ಲಿ ಅನುಮಾನಾಸ್ಪದ ವ್ಯಕ್ತಿ ಗಳ ಬಂಧನ ವಿಚಾರಣೆ?? ಮಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ
ಇನ್ಫೋಸಿಸ್, ಆಸ್ಪತ್ರೆ, ಸೇರಿದಂತೆ ವಿವಿಧೆಡೆ ಪೊಲೀಸರ ಪರಿಶೀಲನೆ ,ಬಾಂಬ್ ಸ್ಕಾಡ್, ಡಾಗ್ ಸ್ಕಾಡ್ ನಿಂದ ಪರಿಶೀಲನೆ ನಡೆಸಲಾಗುತ್ತದೆ ಹಾಗು ಬಂದರು,ಏರ್ ಪೋರ್ಟ್, ರೈಲ್ವೆ ಸ್ಟೇಷನ್, ಬಸ್ ಸ್ಟ್ಯಾಂಡ್ ನಲ್ಲಿ ಕಟ್ಟೆಚ್ಚರ ನೀಡಲಾಗಿದೆ .ಸಮುದ್ರ ಮಾರ್ಗದಲ್ಲಿ ಬಂದ ಉಗ್ರರಿಂದ ಮುಂಬೈ ದಾಳಿಯನ್ನ ನೆನಪಿಸಿಕೊಂಡ ಜಿಲ್ಲಾಡಳಿತ ಸಮುದ್ರದಲ್ಲಿ ಅನುಮಾನಾಸ್ಪದ ಬೋಟ್ ಬಂದರೆ ತಿಳಿಸಲು ಮೀನುಗಾರರಿಗೆ ಸೂಚನೆ ನೀಡಿದೆ.. ಮಂಗಳೂರು, ಮಡಿಕೇರಿ, ಕೇರಳದ ಒಂಬತ್ತು ಮಂದಿಯನ್ಮು ಪಂಪ್ ವೆಲ್ ಲಾಡ್ಜ್ನಿಂದ ಕದ್ರಿ ಪೋಲಿಸರಿಂದ ಬಂಧನ…ಎನ್ ಸಿ ಐಬಿ ಬೋರ್ಡ್ ಹೊಂದಿದ ಕಾರ್ ವಶಕ್ಕೆ ಎಂಬ ಸುದ್ದಿ ಯು ಕೇಳಿ ಬರುತ್ತಿದ್ದೆ!!!!