ಚುನಾವಣೆ ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲುವು – ಬಿ. ಎಸ್. ವೈ ವಿಶ್ವಾಸ

ಉಡುಪಿ : ಬಿ. ಜೆ. ಪಿ. ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ನವರು ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಯವರ ಮನೆಗೆ ಭೇಟಿ ನೀಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಜಿಲ್ಲೆಯಲ್ಲಿ ಆಗಿರುವ ಲೋಕಸಭಾ ಚುನಾವಣೆಯ ಕೆಲಸ ಕಾರ್ಯಗಳ ಬಗ್ಗೆ  ಮಾಹಿತಿ ಪಡೆದರು. ಮುಂದಿನ ೧೦ ದಿನಗಳಲ್ಲಿ ಇನ್ನಷ್ಟು ವೇಗ ಕೊಡಬೇಕೆಂದು  ಪಕ್ಷದ ಪದಾಧಿಕಾರಿಗಳಿಗೆ ಸೂಚಿಸಿದರು.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ  ಶೋಭಾ ಕರಂದ್ಲಾಜೆಯವರು ಗೆಲ್ಲಲಿದ್ದಾರೆ ಎಂದು  ಬಿ.ಎಸ್.ವೈ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್,      ಕೆ. ರಘುಪತಿ ಭಟ್, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ್ ನಾಯಕ್, ಯಶ್‌ಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಬಿ. ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಕಿರಣ್ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!