ಬಿಲ್ಲವ-ಮುಸ್ಲಿಂ ಸಮಾವೇಶಕ್ಕೆ ಭಾಗವಹಿಸುವುದಿಲ್ಲ: ಸಚಿವ ಕೋಟ

ಮಂಗಳೂರು: ಉಡುಪಿ ಪುರಭವನದಲ್ಲಿ ಜ.೧೧ ರಂದು ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎನ್ನುವ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದ ಸಂದೇಶವೊಂದಕ್ಕೆ ಇದೀಗ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಮ್ಮ ಪ್ರತಿಕ್ರಿಯೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂಬ ಬಗ್ಗೆ ಸಂದೇಶಗಳು ಹರಿದಾಡುತ್ತಿದ್ದವು. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿತ್ತು. ಆದರೆ ಇದೀಗ ಈ ವಿಚಾರಕ್ಕೆ ತೆರೆಬಿದ್ದಿದೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಅಲ್ಲದೆ ಆ ಕಾರ್ಯಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಈ ಹಿಂದೆಯೇ ನಿರ್ಧಾರವಾದಂತೆ ಜನವರಿ ೧೧ರಂದು ತಾನು ಶಿವಮೊಗ್ಗ ಜಿಲ್ಲೆಯ ಪ್ರವಾಸದಲ್ಲಿದ್ದು, ಇಲಾಖಾ ಪ್ರಗತಿ ಪರಿಶೀಲನೆ ಮತ್ತು ಅರ್ಚಕರ ಸಮಾವೇಶ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದರು.

ಈ ನಡುವೆ ಕಾಂಗ್ರೆಸ್ ಮುಖಂಡರು ಈ ಸಮಾವೇಶ ಹಮ್ಮಿಕೊಂಡಿದ್ದಾರೆಂದು ತಿಳಿದ ಬಿಲ್ಲವ ಸಂಘಟನೆಯ ಸದಸ್ಯರು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ್ ತೋನ್ಸೆ, ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಲಿರುವ ಚಿಂತಕ ದಿನೇಶ್ ಅಮೀನ್ ಮಟ್ಟು ಅವರಿಗೆ ದೂರವಾಣಿ ಕರೆ ಮಾಡಿ ನಿಂದಿಸುವ ವಾಯ್ಸ್ ವೈರಲ್ ಆಗುತ್ತಿದೆ.

Leave a Reply

Your email address will not be published. Required fields are marked *

error: Content is protected !!