ರಾಜ್ಯದ ಬಹುತೇಕ ನಗರಗಳಲ್ಲಿ ಮುಂದಿನ ಮೂರು ದಿನ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮುಂಗಾರು ಚುರುಕುಗೊಂಡಿದ್ದು ಮುಂದಿನ 5 ದಿನಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ 27ರಿಂದ 29ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮೂರೂ ದಿನಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಸಾಗರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!