ದ.ಕ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ: ಆರೋಪಿ ಪೊಲೀಸ್ ವಶಕ್ಕೆ
ಮಂಗಳೂರು (ಉಡುಪಿ ಟೈಮ್ಸ್ ವರದಿ ) ; ದಕ್ಷಿಣ ಕನ್ನಡ ನಿರ್ಗಮನ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದರ ಕುರಿತು ವರದಿಯಾಗಿದೆ.
ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣವನ್ನ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ದಾಖಲಿಸಿಕೊಂಡಿದ್ದರು.
ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೋಮವಾರ ನೀಡಿದ್ದರು. ಈ ಹೇಳಿಕೆಯ ಸುದ್ದಿಯನ್ನು ಉಲ್ಲೇಖಿಸಿ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚರ್ಚೆ ನಡೆದಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ನೇರವಾಗಿ ಜಿಲ್ಲಾಧಿಕಾರಿಯ ಹತ್ಯೆಯ ಬೆದರಿಕೆಯೊಡ್ಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.