ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋವಿಡ್ ನೆಗೆಟಿವ್
ಉಡುಪಿ (ಉಡುಪಿ ಟೈಮ್ಸ್ ವರದಿ) : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢವಾದ ಹಿನ್ನಲೆ ಮುಖ್ಯಮಂತ್ರಿ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್-19 ಪರೀಕ್ಷಾ ವರದಿ ಬಂದಿದ್ದು ನೆಗೆಟಿವ್ ಆಗಿದೆ ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಸಚಿವ ಕೋಟ, ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರೆಂಟೈನ್’ನಲ್ಲಿದ್ದು ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಅದರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇಂದಿನಿಂದ (ಬುಧವಾರದಿಂದ) ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ಧೇನೆ ಎಂದು ಟ್ವಿಟ್ ಮಾಡಿದ್ದಾರೆ.