ಪಡುಬಿದ್ರೆ ಕಡಲ್ಕೊರೆತ ಸ್ಥಳಕ್ಕೆ ಸಚಿವ ಆರ್ ಅಶೋಕ್ ಭೇಟಿ
ಉಡುಪಿ – (ಉಡುಪಿ ಟೈಮ್ಸ್ ವರದಿ ): ಕಳೆದ ವರ್ಷದ ಅತಿವೃಷ್ಟಿ ಅನಾಹುತಗಳು ಈ ವರ್ಷ ಮರುಕಳಿಸದಂತೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಉಸ್ತುವಾರಿ ಸಚಿವರು ತಕ್ಷಣ ಉಸ್ತುವಾರಿ ಜಿಲ್ಲೆಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕೊಡುಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅತಿವೃಷ್ಟಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಚಿವರು ತಿಳಿಸಿದರು.
ಪಡುಬಿದ್ರಿ ಬೀಚ್‌ನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ ₹ 3.5 ಕೋಟಿ ಹಣವಿದ್ದು, ಹೆಚ್ಚುವರಿಯಾಗಿ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.