ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ (ಆಗಸ್ಟ್ 10) ಪ್ರಕಟ – ಸಚಿವ ಸುರೇಶ್ ಕುಮಾರ್

ಬೆಂಗಳೂರು (ಉಡುಪಿ ಟೈಮ್ಸ್ ವರದಿ ): ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಅಂದರೆ (ಆಗಸ್ಟ್ 10) ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

೨೦೧೯-೨೦೨೦ ರ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರೌಢಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ.
ಕೊರೊನ ಸಂಕಟದ ಮದ್ಯೆಯೇ ನಡುವೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

error: Content is protected !!