ಮಳೆಯಿಂದ ಹಾನಿಯಾದ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

ಉಡುಪಿ (ಉಡುಪಿ ಟೈಮ್ಸ್ ವರದಿ )- ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಇಂದಿರಾನಗರ ವಾರ್ಡ್ ನಿವಾಸಿ ಶಾಂತಾ ನಾಯ್ಕ್ ರವರ ಮನೆ ಗೋಡೆ ಕುಸಿದು ಬಿದ್ದಿದ್ದು ಸ್ಥಳಕ್ಕೆ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಪ್ರಾಕೃತಿಕ ವಿಕೋಪ ನಿಧಿಯಡಿ ಗರಿಷ್ಠ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳದಲ್ಲಿ ಇಂದಿರಾ ನಗರ ವಾರ್ಡಿನ ನಗರಸಭಾ ಸದಸ್ಯರಾದ ಚಂದ್ರಶೇಖರ್ ಮತ್ತು ಕಂದಾಯ ನಿರೀಕ್ಷಕರಾದ ವಿಶ್ವನಾಥ್, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!