ಉಡುಪಿ: ರಾಷ್ಟ್ರೀಯ ವಿಪತ್ತು ನಿಧಿಯಿಂದ ಹತ್ತು ಕೋಟಿ ರೂ. ಬಿಡುಗಡೆ: ಸಚಿವ ಬೊಮ್ಮಾಯಿ
ಪಡುಬಿದ್ರಿ (ಉಡುಪಿ ಟೈಮ್ಸ್ ವರದಿ) : ಪ್ರಧಾನಿ ಮೋದಿ ಅವರೊಂದಿಗೆ ಮುಖ್ಯವಾಗಿ ಕರಾವಳಿಯ 2 ಸಮಸ್ಯೆಗಳ ಶಾಶ್ವತ ಪರಿಹಾರದ ಬಗ್ಗೆ ಈಗಾಗಲೇ ಚರ್ಚಿಸಿದ್ದೇವೆ. ರಾಷ್ಟ್ರೀಯ ವಿಪತ್ತು ನಿಧಿಯಿಂದ ಉಡುಪಿ ಜಿಲ್ಲೆಗೆ ಹತ್ತುಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಪಡುಬಿದ್ರಿ ಬೀಚ್ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಮುಖ್ಯವಾಗಿ ಕಡಲ್ಕೊರೆತ ಅನಿರೀಕ್ಷಿತ. ನೆರವು ವಿಚಾರಗಳಿಗೆ ಸ್ಪಂದಿಸಲು ರಾಜ್ಯದಲ್ಲಿ ನಾಲ್ಕು ತಂಡ ರಚಿಸಲಾಗಿದ್ದು,ಇದು ಎನ್ ಡಿ ಆರ್ ಎಫ್ ಮತ್ತು ಅಗ್ನಿ ಶಾಮಕ ದಳವನ್ನು ಒಳಗೊಂಡಿದೆ ಎಂದರು.
ಜಿಲ್ಲಾಧಿಕಾರಿ ಜಿ ಜಗದೀಶ್, ತಹಶೀಲ್ದಾರ್ ಮಹಮ್ಮದ್ ಇಸಾಖ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿ.ಪಂ ಅಧ್ಯಕ್ಷ ದಿನಕರ ಬಾಬು, ಜಿ.ಪಂ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಗೀತಾಂಜಲಿ ಸುವರ್ಣ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ತಾ.ಪಂ ಸದಸ್ಯೆ ನೀತಾ ಗುರುರಾಜ್,ಪಕ್ಷದ ಪ್ರಮುಖರಾದ ಉದಯಕುಮಾರ್ ಶೆಟ್ಟಿ, ಶ್ರೀಕಾಂತ್ ನಾಯಕ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಕಂದಾಯ ನಿರೀಕ್ಷಕ ರವಿಶಂಕರ್, ಗ್ರಾಮ ಕರಣಿಕ ಶಾಮ್ ಸುಂದರ್ ಮತ್ತಿತರರು ಇದ್ದರು.