ಉಡುಪಿ: ತಾ.ಪಂ ನೂತನ ಅಧ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷರಾಗಿ ಶರತ್ ಆಯ್ಕೆ

ಉಡುಪಿ (ಉಡುಪಿ ಟೈಮ್ಸ್ ವರದಿ) : ತಾಲೂಕು ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಆಗಸ್ಟ್ 13 ರಂದು ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಚುನಾವಣೆ ನಡೆದಿದ್ದು. ಅಧ್ಯಕ್ಷೆಯಾಗಿ ಸಂಧ್ಯಾ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ಶರತ್ ಕುಮಾರ್ ಬೈಲಕೆರೆ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.


ಈ ಸಂದರ್ಭದಲ್ಲಿ ಚುನಾವಣಾಧಿಕಾರಿಯಾಗಿ ಕುಂದಾಪುರ ಸಹಾಯಕ ಕಮಿಷನರ್ ರಾಜು ಇವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯನ್ನು ನಡೆಸಿಕೊಟ್ಟರು , ಉಡುಪಿ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮೋಹನ್ ರಾಜ್ ಹಾಗೂ ಆವಿಭಜಿತ ಉಡುಪಿ , ಕಾಪು ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!