ಎಚ್​ಡಿಕೆ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತ ವಿದ್ಯುತ್ ಸಂಪರ್ಕ: ಮಾಜಿ ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಸಮೇತ ಆರೋಪ ಮಾಡಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ತನ್ನ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ” ಎಂದೂ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!