ಜಮ್ಮು ಮತ್ತು ಕಾಶ್ಮೀರ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಟಲ್ ಡುಲ್ಲೊ ನೇಮಕ
ಜ.ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ನೇಮಕ ಮಾಡಿದೆ
ಪ್ರಸ್ತುತ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮೆಹ್ತಾ ಅವರು 30.11.2023 ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ 1989ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರಾಡಳಿತ ಪ್ರದೇಶಗಳು ಅಥವಾ ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ ಕೇಡರ್ನ 1989ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಡುಲ್ಲೋ ಅವರು ಜಮ್ಮು ಮತ್ತು ಕಾಶ್ಮೀರ ಸೇವೆಗೆ ವಾಪಸಾಗುವ ಮುನ್ನ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಗಡಿ ನಿರ್ವಹಣಾ ಇಲಾಖೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.