ಉಡುಪಿ: ಮತ್ತೆ 21 ಪಾಸಿಟಿವ್, ರಾಜ್ಯದಲ್ಲಿ 5 ಬಲಿ

ಉಡುಪಿ – ಜಿಲ್ಲೆಯಲ್ಲಿ ಮತ್ತೆ 21 ಕೂರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1026 ಕ್ಕೆ ಏರಿಕೆಯಾಗಿದೆ.
ರಾಜ್ಯದ ಹೆಲ್ತ್ ಬುಲೆಟಿನ್ ಪ್ರಕಾರ ಮಹಾರಾಷ್ಟ್ರದಿಂದ ಬಂದ 18 ಮಂದಿಗೆ, ಉತ್ತರ ಪ್ರದೇಶ ಹಾಗು ತಮಿಳುನಾಡಿನಿಂದ ಬಂದ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. ಹಾಗು ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೆ ಇರುವ ವ್ಯಕ್ತಿಗೆ ಕೊರೋನಾ ಕಾಣಿಸಿಕೊಂಡಿದ್ದು ಆಂತಂಕ ಮೂಡಿಸಿದೆ. ಎಲ್ಲ ಸೋಂಕಿತರನ್ನು ನಿಗದಿತ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಇಂದು ಹೊಸದಾಗಿ 176 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 5 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಕರ್ನಾಟಕದಲ್ಲಿ ಇಂದು 176 ಪ್ರಕರಣ ಪತ್ತೆಯಾಗಿದೆ. ಇನ್ನು 5 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಪತ್ತೆಯಾಗಿರುವ 7000 ಪ್ರಕರಣಗಳ ಪೈಕಿ 3,955 ಮಂದಿ ಗುಣಮುಖರಾಗಿದ್ದಾರೆ. ಇನ್ನು 2,956 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Leave a Reply

Your email address will not be published. Required fields are marked *

error: Content is protected !!