ಭುಜಂಗ ಪಾರ್ಕ್ ಸ್ವಚ್ಚತೆಗೆ ಹೋದ ಸಾಮಾಜಿಕ ಕಾರ್ಯಕರ್ತರಿಗೆ ಬಿಗ್ ಶಾಕ್!

ಉಡುಪಿ -; ನಗರದ ಹೃದಯ ಭಾಗದಲ್ಲಿರುವ ಅಜ್ಜರಕಾಡು ಉದ್ಯಾನವನದ ಬಳಿಯ ಹುತಾತ್ಮ ಸೈನಿಕರ ಸ್ಮಾರಕದ ಬಳಿ, ಕುಡುಕರು ಅಲ್ಲಲ್ಲಿ ಎಸೆದಿರುವ ಸಾವಿರಾರು ಮದ್ಯದ ಬಾಟಲಿಗಳನ್ನು ತೆರವುಗೊಳಿಸಲು ಜಿಲ್ಲಾ ನಾಗರಿಕ ಸಮಿತಿ ಹಾಗೂ ಸ್ವಚ್ಚ ಭಾರತ್ ಫ್ರೆಂಡ್ಸ್ ಇವರು ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಿದರು. ಜಂಟಿ ಸಮಿತಿಯ ಕಾರ್ಯಕರ್ತರು ಸುರಿಯುವ ಮಳೆಯಲ್ಲಿಯೇ ಬಾಟಲಿಗಳ ಒಟ್ಟುಗೂಡಿಸಿ ಆಯಾಕಟ್ಟಿನ ಸ್ಥಳಗಳಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ. ವಿಲೇವಾರಿಗೊಳಿಸಲು ಸಂಬಂಧಪಟ್ಟವರಿಗೆ ತಿಳಿಸಿಟ್ಟಿದ್ದಾರೆ. ಸ್ವಚ್ಚತಾ ಸೇವಾಕಾರ್ಯದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು, ಹಾಗೂ ಸ್ವಚ್ಚ ಭಾರತ ಪ್ರೇಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು, ಕರ್ವಾಲು, ಜೆಸಿ ಉಡುಪಿ ಸಿಟಿ ಪೂರ್ವಾದ್ಯಕ್ಷ ಜಗದೀಶ್ ಶೆಟ್ಟಿ , ಉದಯ ನಾಯ್ಕ ಪಾಲ್ಗೊಂಡಿದ್ದರು

ಅಜ್ಜರಕಾಡು ಭುಜಂಗ ಪಾರ್ಕ್ ಇದೊಂದು ನಗರದ ಏಕೈಕ ವಾಯುವಿಹಾರ ತಾಣ. ಇಲ್ಲಿಗೆ ಹಿರಿಯ ನಾಗರಿಕರು, ಚಿಕ್ಕ ಮಕ್ಕಳು, ವಾಯು ವಿಹಾರಿಗಳು ಬರುತ್ತಾರೆ. ಇಲ್ಲಿ ಕುಡುಕುರ ಹಾವಳಿಯಿಂದಾಗಿ ಸಾರ್ವಜನಿಕರು ಭಯಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಇಲ್ಲದಿದ್ದರೂ ಇಲ್ಲಿ ಕಾನೂನಿಗೆ ವಿರುದ್ಧವಾಗಿ ರಾತ್ರಿಯ ಹೊತ್ತಿನಲ್ಲಿ ಮದ್ಯಗೋಷ್ಠಿಗಳು ನಡೆಯುತ್ತಿವೆ. ಹುತಾತ್ಮ ಸೈನಿಕರ ಸ್ಮಾರಕದ ವಠಾರದಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಮಹಾ ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ. ನಗರಡಾಳಿತ ಜಿಲ್ಲಾಡಳಿತವು ಅಜ್ಜರಕಾಡು ಪಾರ್ಕಿಗೆ ಕಾವಲುಗಾರನ ವ್ಯವಸ್ಥೆ, ಪೊಲೀಸ್ ಗಸ್ತು, ಬೆಳಕಿನ ವ್ಯವಸ್ಥೆಗಳೊಂದಿಗೆ ಇಲ್ಲಿಗೆ ಬರುವ ಸಾರ್ವಜನಿಕರಿಗೆ ಸುರಕ್ಷೆ ಒದಗಿಸಬೇಕೆಂದು ಜಂಟಿ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!