ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದುಗೊಳಿಸುವಂತೆ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಆಗ್ರಹ

ಉಡುಪಿ (ಉಡುಪಿ ಟೈಮ್ಸ್ ವರದಿ) : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ಪರೀಕ್ಷೆಗಳನ್ನು ಮಾತ್ರ ನಡೆಸಲು ನಿರ್ಧರಿಸಿರುವ ರಾಜ್ಯ ಸರಕಾರದ ನಿರ್ಣಯವನ್ನು ಎನ್ ಎಸ್ ಯು ಐ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಕ್ರಿಸ್ಟನ್ ಡಿ ಆಲ್ಮೇಡಾ ಅವರು ದೇಶ ಮತ್ತು ರಾಜ್ಯದಲ್ಲಿ ಕರೋನಾ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿರುವುದರಿಂದ, ಈ ಬಿಕ್ಕಟ್ಟಿನ ಸಂದರ್ಬದಲ್ಲಿ ಯಾವುದೇ ಪರೀಕ್ಷೆಯು ಆನ್ಲೈನ್ ಅಥವಾ ಆಫ್ಲೈನ್ ಆಗಿರಲಿ ವಿದ್ಯಾರ್ಥಿ ಸಮುದಾಯಕ್ಕೆ ಮಾಡುವ ಅನ್ಯಾಯವಾಗುತ್ತದೆ. ಸರ್ಕಾರ ತಳ ಮಟ್ಟದ ವಾಸ್ತವಿಕತೆಯನ್ನು, ವಿದ್ಯಾರ್ಥಿಗಳ ಒತ್ತಾಯವನ್ನು ಅರ್ಥಮಾಡಿಕೊಳ್ಳಬೇಕು. ರಾಜ್ಯ ಹಾಗೂ ದೇಶದ ಆಡಳಿತ ವರ್ಗ ಲಕ್ಷಾಂತರ ವಿದ್ಯಾರ್ಥಿಗಳ ಧ್ವನಿಗೆ ಒಗೊಟ್ಟು, ಪ್ರಸ್ತುತ ಪರಿಸ್ಥಿತಿಯಲ್ಲಿ   ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸದಂತೆ ಅವರು ಆಗ್ರಹಿಸಿದ್ದಾರೆ.ಕೋರೋನಾ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಪ್ರಸ್ತುತ ಯಾವುದೇ ವಿಧಾನಸಭಾ ಅಧಿವೇಶನವಾಗಲಿ ನಡೆಸುತ್ತಿಲ್ಲ. ಚಲನಚಿತ್ರ ಮಂದಿರಳು ತೆರೆದಿಲ್ಲ. ಕನಿಷ್ಠ ಸಂಖ್ಯೆಯ ಜನರನ್ನು ಸೇರಿಸಿ ಮದುವೆ, ಶುಭ ಸಮಾರಂಭಗಳನ್ನು ನಡೆಸಲಾಗುತ್ತಿದೆ. ಆದರೆ ಸರಕಾರ ಅಮಾಯಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಒತ್ತಡಹೇರುತ್ತಿರುವುದು ಎಷ್ಟು ಸರಿ?   ಯುಜಿಸಿ ಇಲಾಖೆ ವಿದ್ಯಾರ್ಥಿಗಳ ಜೀವನದ  ತಮ್ಮ ಗುಪ್ತ ಉದ್ದೇಶಗಳಿಗಾಗಿ ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗವನ್ನು ಮಾಡಲು ಬಯಸಿದೆ ಇದು ಖಂಡನೀಯವಾಗಿದೆ.ಪ್ರಥಮ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತಿದ್ದಂತೆ, ಅಂತಿಮ ವರ್ಷದಲ್ಲಿ ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸುತ್ತಾರೆ ಎಂದು ಗಮನಿಸಿದ ಕಾರಣ ಹಿಂದಿನ ವರ್ಷದ ಸಾಧನೆಯ ಆಧಾರದ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು 10% ಹೆಚ್ಚುವರಿ ಅಂಕಗಳೊಂದಿಗೆ ಉತ್ತೇಜಿಸಲು ನಾವು ಸರ್ಕಾರವನ್ನು ಎನ್ ಎಸ್ ಯು ಐ ಸರಕಾರವನ್ನು ಒತ್ತಾಯಿಸಿದೆ.

Leave a Reply

Your email address will not be published. Required fields are marked *

error: Content is protected !!