ಜುಲೈ 22 ಬಸ್ ಸಂಚಾರ: ಡಿಸಿ. ಯಾವುದೇ ನಿರ್ಧಾರ ಮಾಡಿಲ್ಲ: ಸುರೇಶ ನಾಯಕ್

ಉಡುಪಿ: (ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಜುಲೈ 22ರಿಂದ ಮತ್ತೆ ಬಸ್ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.
ಕೊರೊನಾ ಸೋಂಕು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಿದ ಹಿನ್ನೆಯಲ್ಲಿ ಉಡುಪಿ ಜಿಲ್ಲಾಧಿಕಾರಿಯವರು ತಮಗಿದ್ದ ಅಧಿಕಾರ ಬಳಸಿ  ಜುಲೈ 14 ರಿಂದ ಗಡಿಗಳನ್ನು ಸಿಲ್ ಡೌನ್ ಮಾಡಿ ಆದೇಶ ಮಾಡಿದ್ದರು.


 ರಾಜ್ಯ ಸರಕಾರದ ನಿರ್ಧಾರದಂತೆ ಜಿಲ್ಲೆಯಲ್ಲಿ ಕೂಡಾ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಬುಧವಾರದಿಂದ ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲಿಸಿ ಬಸ್ ಸಂಚಾರ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ.  ಪ್ರಯಾಣಿಕರು, ಬಸ್ ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸುವುದು, ಬಸ್‌ಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿ ಸಂಚರಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.

ಜಿಲ್ಲಾ ಗಡಿಗಳಲ್ಲಿ ಚೆಕ್ ಪೋಸ್ಟ್ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಜಿಲ್ಲೆಯ ಒಳಗೆ ಬರುವ ಮತ್ತು ಹೊರ ಹೋಗುವ ವ್ಯಕ್ತಿಗಳನ್ನು ತೀವ್ರವಾಗಿ ತಪಾಸಣೆ ಗುರಿಪಡಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.


ಬಸ್ ಸಂಚಾರದ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ: ಕುಯಿಲಾಡಿ ಸುರೇಶ ನಾಯಕ್
ಜಿಲ್ಲೆಯಲ್ಲಿ  ಜುಲೈ 22 ರಿಂದ ಮತ್ತೆ ಬಸ್ ಸಂಚಾರ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಉಡುಪಿ ಟೈಮ್ಸ್‌ಗೆ ತಿಳಿಸಿದ್ದಾರೆ. ಬಸ್ ಸಂಚಾರ ಪ್ರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು.

1 thought on “ಜುಲೈ 22 ಬಸ್ ಸಂಚಾರ: ಡಿಸಿ. ಯಾವುದೇ ನಿರ್ಧಾರ ಮಾಡಿಲ್ಲ: ಸುರೇಶ ನಾಯಕ್

  1. KSRTC buses should run all the Routes of Udupi dist. , and from Siddapura to Udupi, via Haalaadi, Bidkalkatte, Shiriyara, Saibarkatte, Barkur, Brahmavara, Udupi. People facing the problem with out bus conveyance.

Leave a Reply

Your email address will not be published. Required fields are marked *

error: Content is protected !!