ಉಡುಪಿ – ಮಾಲ್ ,ರೆಸ್ಟೋರೆಂಟ್ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಉಡುಪಿ – ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ಮಾಲ್ ಗಳು, ಶಾಪಿಂಗ್ ಕಾಂಪ್ಲೆಕ್ಸ್ ಗಳು, ಅಂಗಡಿ ಮುಂಗಟ್ಟುಗಳು, ಝೋಮೊಟೊ , ಸ್ವೀಗಿ ಯಂತಹ ಆಹಾರ ವಿತರಕ ಸಂಸ್ಥೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿನ ಮಾಲಕರು ಹಾಗು ಸಂಬಂಧಪಟ್ಟವರು ತಮ್ಮ ತಮ್ಮ ಎಲ್ಲಾ ಸಿಬ್ಬಂದಿಗಳನ್ನು ತಮ್ಮ ವ್ಯಾಪ್ತಿಗೆ ಬರುವ ತಾಲೂಕು ಆರೋಗ್ಯಾಧಿಕಾರಿ ಅವರನ್ನು ಸಂಪರ್ಕಿಸಿ ದಿನಾಂಕವನ್ನು ನಿಗದಿಪಡಿಸಿಕೊಂಡು ತಮಗೆ ಹತ್ತಿರವಿರುವ Fever Clinic ನಲ್ಲಿ ತಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಯವರಿಗೆ ತಪಾಸಣೆ ಮಾಡಬೇಕಾಗಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ತಮ್ಮ ಯಾವುದೇ ಅನುಮಾನಿಗಳಿದ್ದರೆ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆ ಕೆಳಗಡೆ ನಮೂದಿಸಲಗಿದೆ
08202526428 : 08258231788
ಈ ಆದೇಶವನ್ನು ಉಲ್ಲಂಘಿಸಿ ದಲ್ಲಿ ಅಂತಹ ಸಂಸ್ಥೆಯವರನ್ನ ಅಪರಾಧಿ ಎಂದು ಪರಿಗಣಿಸಿ ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂಬುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ

error: Content is protected !!